ಬೆಳಗಾವಿ : ಸಿದ್ದರಾಮಯ್ಯ ಔಟ್ ಗೋಯಿಂಗ್ ಚೀಫ್ ಮಿನಿಸ್ಟರ್ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆ ಅಧಿವೇಶನ ಎಂದು ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.
ಪಾಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ ಮುಖ್ಯಮಂತ್ರಿಗಳ ಪಾಲಿನ ದಾಟಿ ನೋಡಿದರೆ ನಿಮಗೆ ಅರ್ಥ ಆಗುತ್ತದೆ ಸದನದಲ್ಲಿ ಚರ್ಚಿಸುವುದಕ್ಕೆ ಮುಖ್ಯಮಂತ್ರಿಗಳಿಂದ ಪರಿಹಾರ ಸಿಗುತ್ತದೆ ಎನ್ನುವ ಆಶಾ ಭಾವನೆ ಇಲ್ಲ.
ನೀವು ಸಿಎಂ ಆಗಿ ಎಷ್ಟು ದಿನ ಇರುತ್ತೀರಿ ಅನ್ನೋದು ಮುಖ್ಯ ಅಲ್ಲ ಆ ಸ್ಥಾನದಲ್ಲಿದ್ದು ರಾಜ್ಯಕ್ಕೆ ಏನು ಕೆಲಸ ಮಾಡಿದ್ದೀರಿ ಎನ್ನುವುದು ಮುಖ್ಯವಾಗುತ್ತದೆ ಎರಡುವರೆ ವರ್ಷಗಳಿಂದ ಏನು ಮಾಡದೆ ಇರುವವರು ಈ ಎರಡು ವಾರದಲ್ಲಿ ಏನು ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.








