Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ಕಂದಾಯ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಗುಡ್ ನ್ಯೂಸ್ : `ಹಕ್ಕುಪತ್ರ, ಖಾತಾ’ ನೀಡಲು ಕ್ರಮ.!
KARNATAKA

BIG NEWS : ರಾಜ್ಯ ಸರ್ಕಾರದಿಂದ ಕಂದಾಯ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಗುಡ್ ನ್ಯೂಸ್ : `ಹಕ್ಕುಪತ್ರ, ಖಾತಾ’ ನೀಡಲು ಕ್ರಮ.!

By kannadanewsnow5720/12/2025 5:48 AM

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ ಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬಗಳು ಕಂಪ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರಕುತ್ತದೆ ಎಂದು ಈ ಹಿಂದೆ ಕಂದಾಯ ಜಮೀನಿನ ನಿವೇಶನಗಳಲ್ಲಿ ಜಮೀನಿನ ಮಾಲೀಕರೊಂದಿಗೆ ಅಗ್ರೀಮೆಂಟ್ ಪತ್ರ ಮಾಡಿಕೊಂಡು ಖರೀದಿಸಿ, ಈಗಾಗಲೇ ವಸತಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದಾರೆ, ಇಂತಹ ಪ್ರಕರಣಗಳು ರಾಜ್ಯಾದ್ಯಂತ ಇವೆ. ಹೀಗಾಗಿ ಇಂತಹವರಿಗೆ ದಾಖಲೆಗಳನ್ನು ಪರಿಶೀಲಿಸಿ, ಹಕ್ಕುಪತ್ರ ಕೊಡಿಸಿ, ಇವರಿಗೆ ನ್ಯಾಯ ಒದಗಿಸಿಕೊಡಬೇಕಿದೆ ಎಂದು ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಮನವಿ ಮಾಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಈಗಾಗಲೇ ಕಂದಾಯ ನಿವೇಶನಗಳಿಗೆ ಖರೀದಿಯ ಕ್ರಯಪತ್ರ ಮುಂತಾದ ದಾಖಲೆಗಳನ್ನು ಪರಿಶೀಲಿಸಿ, ಇ-ಸ್ವತ್ತು ನೀಡಿ, ಅವುಗಳನ್ನು ತೆರಿಗೆ ವ್ಯಾಪ್ತಿಗೆ ಸೇರಿಸಲು ಕ್ರಮ ವಹಿಸಿದ್ದು, ಈವರೆಗೆ 2,936 ಅರ್ಜಿಗಳು ಸ್ವೀಕೃತವಾಗಿವೆ.
ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ ಅಥವಾ ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿನ ನಿವಾಸಿಗಳಿಗೆ ಭೂಸುಧಾರಣಾ ಕಾಯ್ದೆ ಅನ್ವಯ ಹಕ್ಕುಪತ್ರಗಳನ್ನು ಕಂದಾಯ ಇಲಾಖೆಯಿಂದ ವಿತರಿಸಲು ಅವಕಾಶ ಕಲ್ಪಿಸಲಾಗಿದ್ದು, ಕಂದಾಯ ಇಲಾಖೆಯಿಂದ ಹಕ್ಕುಪತ್ರ ಒದಗಿಸಿದಲ್ಲಿ, ಗ್ರಾಮ ಪಂಚಾಯತಿಗಳಿಗೆ ಖಾತೆ ವಿತರಣೆ ಮಾಡಲು ಅವಕಾಶವಿರುತ್ತದೆ. ಆದರೆ ಕೇವಲ ಅಗ್ರೀಮೆಂಟ್ ಪತ್ರದ ಆಧಾರದಲ್ಲಿ ನಿವೇಶನ ಖರೀದಿಸಿ, ವಸತಿ ನಿರ್ಮಿಸಿದವರಿಗೆ, ಒಂದು ಬಾರಿಯ ಪರಿಹಾರವಾಗಿ ಖಾತಾ ಮಾಡಿಕೊಡಲು ನಿಯಮಗಳನ್ನು ರೂಪಿಸಬೇಕಾಗುತ್ತದೆ. ಇದು ತಕ್ಷಣಕ್ಕೆ ಆಗುವ ಕೆಲಸವಲ್ಲ, ಇದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಇದಕ್ಕೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದರು.

account'! BIG NEWS: Good news for those who built houses on revenue land from the state government: Steps to issue 'title deed
Share. Facebook Twitter LinkedIn WhatsApp Email

Related Posts

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM1 Min Read

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM1 Min Read

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM2 Mins Read
Recent News

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

ಸಿಎಸ್‌ಕೆ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರ: ರೋಹಿತ್ ಶರ್ಮಾ ದಾಖಲೆ ಪುಡಿಪುಡಿ ಮಾಡಿದ ‘ಕಿಂಗ್ ಕೊಹ್ಲಿ’!

05/04/2026 9:15 PM
State News
KARNATAKA

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

By kannadanewsnow0905/04/2026 9:28 PM KARNATAKA 1 Min Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು…

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM

ಮನೆಯ ‘ಗೃಹಮಂತ್ರಿ’ಯಾದತಂಹ ಗೃಹಿಣಿಗಾಗಿ ಉಪಯುಕ್ತ ‘ಟಿಪ್ಸ್’ಗಳು.!

05/04/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.