ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು, ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು, ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಹೈಕೋರ್ಟ್ ಆದೇಶ ಹೊರಸಿದೆ. ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಹೈಕೋರ್ಟ್ ಪೀಠ ಸೂಚನೆ ನೀಡಿದ್ದು, ಅಲ್ಲಿಯವರೆಗೂ ಭೈರತಿ ಬಸವರಾಜುಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಹೀಗಾಗಿ ಹೈಕೋರ್ಟ್ ಆದೇಶದಿಂದ ಭೈರತಿ ಬಸವರಾಜುಗೆ ಬಂಧನ ಭೀತಿ ಎದುರಾಗಿದೆ. ಆದರೆ ಉಳಿದ ಆರೋಪಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಇದೆ.








