ಬೆಂಗಳೂರು: ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಕುಮಾರ್ ಅವರು ನಾಳೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು, ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಅವರು ದಿನಾಂಕ 20-12-2025ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದವನ್ನು ಏರ್ಪಡಿಸಿದ್ದು, ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ.
ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕಾರ್ಯಗಾರ, ಸಂವಾದ ಕಾರ್ಯಕ್ರಮ ನಡೆಯಲಿದೆ. ತಪ್ಪದೇ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಪಾಲ್ಗೊಳ್ಳುವಂತೆ ತಿಳಿಸಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 1ರಿಂದ 2 ಗಂಟೆಯ ವೇಳೆಗೆ ಮಾಹಿತಿ ಹಕ್ಕು ಕಾಯ್ದೆ ಕುರಿತಂತೆ ಸಾರ್ವಜನಿಕರು ಹಾಗೂ ಮಾಧ್ಯಮದ ಪ್ರತಿನಿಧಿಗಳ ಜೊತೆಯಲ್ಲಿ ಸಂವಾದ, ಚರ್ಚೆಯನ್ನು ರಾಜ್ಯ ಮಾಹಿತಿ ಹಕ್ಕು ಆಯುಕ್ತರಾದಂತ ಬದ್ರುದ್ದೀನ್.ಕೆ ಹಾಗೂ ಡಾ.ಹರೀಶ್ ಕುಮಾರ್ ನಡೆಸಲಿದ್ದಾರೆ ಎಂದಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..
SHOCKING: ಆಸ್ತಿಗಾಗಿ ತನ್ನ ಅಜ್ಜಿಯ ಮೇಲೆ ಮಿನಿ ಟ್ರಕ್ ಹರಿಸಿ ಕೊಂದ ಮೊಮ್ಮಗ
ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 1000 ಹೆಚ್ಚುವರಿ ವಿಶೇಷ ‘KSRTC ಬಸ್’ ಸಂಚಾರದ ವ್ಯವಸ್ಥೆ








