ಶಿವಮೊಗ್ಗ : ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ.
ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣ: ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ.
ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ.
ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ₹83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ₹80.66 ಕೋಟಿ ಲಭ್ಯವಿರುತ್ತದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಉತ್ತರಿಸಿದರು.
ನಾಳೆ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್.ಕೆ ಕೊಡಗು ಜಿಲ್ಲೆಗೆ ಪ್ರವಾಸ: ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಜಾಗೃತಿ








