ಶಿವಮೊಗ್ಗ: ಜಿಲ್ಲೆಯ ಸಾಗರದ ಚಂದ್ರಮಾವಿನ ಕೊಪ್ಪಲು ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರವಾದಂತ ಗಾಯವಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ತಾಳಗುಪ್ಪದಿಂದ ಮೈಸೂರಿಗೆ ಹೊರಡುವ ರೈಲು ಗಾಡಿ ಸಂಖ್ಯೆ 16205 ಇಂದು ಮದ್ಯಾಹ್ನ ಸಾಗರ ಪಟ್ಟಣದ ಚಂದ್ರಮಾವಿನಕೊಪ್ಪಲು ಬಳಿ ಹಾದು ಹೋಗುವ ಸಮಯದಲ್ಲಿ ಈ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಮುಗುಡ್ತಿ ಗ್ರಾಮದ ನರೇಂದ್ರ ಕುಮಾರ್(61) ಎಂಬುದಾಗಿ ಹೇಳಲಾಗುತ್ತಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದಂತ ಸಂದರ್ಭದಲ್ಲಿ ತಲೆಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಾಗರದಲ್ಲಿ ಚಿಕಿತ್ಸೆ ನಂತ್ರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.
ನರೇಂದ್ರ ಕುಮಾರ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದೋ ಅಥವಾ ರೈಲು ಚಲಿಸುತ್ತಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿರೋದೋ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಟ್ಟಿಂಗ್ ಆ್ಯಪ್ ಕೇಸ್: ಯುವರಾಜ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿದ ED








