ಬೆಂಗಳೂರು : ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲಿ 96,844 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ನೌಕರರು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ ಕೃಷಿ (15,824) ಮತ್ತು ಪಶುಸಂಗೋಪನೆ ಇಲಾಖೆಯಲ್ಲಿ(15376) ಹೆಚ್ಚು ನೌಕರರು ಕೆಲಸ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನವನ್ನು ಸರ್ಕಾರ ನಿಗದಿಪಡಿಸಿದೆ. ಒಳಗುತ್ತಿಗೆ ನೌಕರರು, ಸರ್ಕಾರದಿಂದಲೇ ಗುತ್ತಿಗೆ ಆಧಾರದಲ್ಲಿ ನೇಮಕವಾಗಲಿದ್ದಾರೆ. ಅವರಿಗೆ ವೇತನ, ಪಿಎಫ್ ಸೇರಿ ಇತರ ಸೌಲಭ್ಯವನ್ನು ಆಯಾ ಇಲಾಖೆಗಳು ನೀಡಲಿವೆ.









