ತುಮಕೂರು : ತುಮಕೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಂಧ್ರ ಪ್ರದೇಶದ ಬಸ್ ಹಾಗು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಒಂದು ಘಟನೆ ನಡೆದಿದೆ
ಮೃತ ಚಾಲಕನನ್ನು ಐರ್ವಲಹಳ್ಳಿ ಗ್ರಾಮದ ರಾಜಶೇಖರ ರೆಡ್ಡಿ (40) ಎಂದು ತಿಳಿದು ಬಂದಿದೆ. ಆಂಧ್ರ ಪ್ರದೇಶದ ಪೆನುಗೊಂಡ ಕಡೆಯಿಂದ ಬಸ್ ಪಾವಗಡ ಕಡೆಗೆ ಬರುತ್ತಿತ್ತು ಬಸ್ ನಲ್ಲಿ ಇದ್ದಂತಹ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








