ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವದಂಪತಿಗಳು ಬೈಕ್ನಲ್ಲಿ ಚಲಿಸುತ್ತಿದ್ದರು. ಈ ವೇಳೆ ಕೆಟ್ಟು ನಿಂತ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರಲ್ಲಿ ನಡೆದಿದೆ.
ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ನವವಿವಾಹಿತ ದಂಪತಿ ತೆರಳುತ್ತಿದ್ದ ದ್ವಿಚಕ್ರವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ, ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ನವವಿವಾಹಿತೆ ವರ್ಷಿಣಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದು, ಸವಾರ ಸುರೇಂದ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವರ್ಷಿಣಿ ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದವರು. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸುರೇಂದ್ರ ಅವರ ಜೊತೆಗೆ ಮದುವೆಯಾಗಿದ್ದರು.ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಂದ್ರರನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬಾಗೇಪಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.








