ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್ ನೀಡಿದ್ದಾರೆ. ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ. ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸೋಮವಾರದಿಂದ ಶನಿವಾರದೊಳಗೆ ಬಿಡುಗಡೆಯಾಗಲಿದೆ. ಆ ಮೂಲಕ ಹಣ ಬರುತ್ತದೆ ಎಂದ ಕಾದುಕುಳಿತವರಿಗೆ ಗುಡ್ನ್ಯೂಸ್ ಕೊಟ್ಟಿದ್ದಾರೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಕೈ ಸೇರಲಿದೆ.








