ಶಿವಮೊಗ್ಗ : ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಅವರನ್ನು ಅಂಗವೈಕಲ್ಯದಿoದ ದೂರ ಇರಿಸಲು ಸಾಧ್ಯವಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಕ್ಕಳಿಗೆ ಹನಿ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದಂತ ಅವರು, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರು ಹಿಂದೇಟು ಹಾಕಬೇಡಿ. ದೇಶದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವುದು ಪ್ರಾರಂಭವಾದ ನಂತರ ಮಕ್ಕಳ ಅಂಗವೈಕಲ್ಯ ಪ್ರಮಾಣ ಕಡಿಮೆಯಾಗಿದೆ. ಕಡ್ಡಾಯವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ದೇಶದ ಭವಿಷ್ಯವಾಗಿರುವ ಮಕ್ಕಳನ್ನು ಈಗಿನಿಂದಲೆ ಜೋಪಾನವಾಗಿ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಉಪವಿಭಾಗೀಯ ಆಸ್ಪತ್ರೆ ಸೇರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಇನ್ನಿತರೆ ಕಡೆಗಳಲ್ಲಿ ಪೊಲೀಯೋ ಲಸಿಕೆ ಹಾಕುತ್ತಿದ್ದು ಪೋಷಕರು ಇದರ ಪ್ರಯೋಜನ ಪಡೆಯಬೇಕು ಎಂದರು.
ಈ ವೇಳೆ ಸಿವಿಲ್ ಸರ್ಜನ್ ಡಾ.ನಾಗರಾಜ್, ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್, ಡಾ.ಶ್ರೀನಿವಾಸ್, ಡಾ.ಗುಡದಪ್ಪ, ಗಣಪತಿ ಮಂಡಗಳಲೆ, ಆರೋಗ್ಯ ರಕ್ಷಾ ಸಮಿತಿಯ ಮಧುಮಾಲತಿ, ಜಯರಾಮ್, ಸುರೇಶ್, ರವಿಕುಮಾರ್ ಇನ್ನಿತರರು ಹಾಜರಿದ್ದರು.
BREAKING: MGNREGA ಬದಲಿಗೆ G-RAM G ಮಸೂದೆಗೆ ರಾಷ್ಟ್ರಪತಿಗಳ ಅಂಕಿತ, ಕಾನೂನಾಗಿ ಪರಿವರ್ತನೆ
ಸೊರಬದ ಉಳವಿಯಲ್ಲಿ ನೂತನ KSRTC ಬಸ್ ನಿಲ್ದಾಣ, ಆಸ್ಪತ್ರೆ ಕ್ವಾಟ್ರಾಸ್ ನಿರ್ಮಾಣ: ಸಚಿವ ಮಧು ಬಂಗಾರಪ್ಪ








