ಶಿವಮೊಗ್ಗ: ಸುಪ್ರೀಂ ಕೋರ್ಟ್ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರೋದಕ್ಕೆ ನಿವೃತ್ತಿ ಅಂಚಿನಲ್ಲಿರೋರನ್ನು ಹೊರತುಪಡಿಸಿ, ಉಳಿದ ಎಲ್ಲಾ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ ( Teacher Eligibility Test-TET) ಬರೆಯಬೇಕೆಂದು ಆದೇಶಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸುಪ್ರೀಂ ಕೋರ್ಟ್ ಆದೇಶ ಸರಿಯಾಗಿದೆ. ಆದರೇ ಈಗ ಇರುವಂತ ಶಿಕ್ಷಕರು 20, 30 ವರ್ಷಗಳ ಹಿಂದೆ ನೇಮಕಗೊಂಡಿದ್ದಾರೆ. ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿ ಇಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆ ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು ಎಂದರು.
ಫಲಿತಾಂಶ ಸುಧಾರಣೆಯಲ್ಲಿ ಶ್ರಮಿಸಿದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಅವರು, ಶಾಲೆಗಳಲ್ಲಿ ಫಲಿತಾಂಶ ಸುಧಾರಣೆ ಎಂಬುದು ಓರ್ವ ಶಿಕ್ಷಕರಿಂದ ಮಾತ್ರ ಸಾಧ್ಯವಾಗುವುದಿಲ್ಲ ಬದಲಾಗಿ ಶಿಕ್ಷಕರ ಸಂಘಟಿತ ಶ್ರಮದಿಂದ ಮಾತ್ರ ಸಾಧ್ಯವಾಗಲಿದೆ. ಸರ್ಕಾರಿ ಶಾಲೆಗೆ ದಾಖಲಾಗುವ ಬಹುತೇಕ ಮಕ್ಕಳು ಸಾಮಾನ್ಯ ಕುಟುಂಬದಿಂದ ಬಂದವರಾಗಿದ್ದು, ಕಲಿಕೆಯಲ್ಲಿ ಹಿಂದುಳಿದವರಾಗಿರುತ್ತಾರೆ. ಆ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಫಲಿತಾಂಶ ನಿರೀಕ್ಷಿಸುವುದು ಸರಿಯಾದ ಕ್ರಮವೆನಿಸಿದೆ. ಅದಕ್ಕಾಗಿ ಶಾಲೆಗಳಿಗೆ ಹಂತಹಂತವಾಗಿ ಎಲ್ಲರೀತಿಯ ಸೌಲಭ್ಯವನ್ನು ಒದಗಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದರು.
ಮುಂದಿನ ಶೈಕ್ಷಣಿಕ ಸಾಲಿನ ಆರಂಭದೊಳಗಾಗಿ ಕೊರತೆ ಇರುವ 12000 ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ 2026ರ ಜನವರಿ ಮಾಸಾಂತ್ಯದೊಳಗಾಗಿ 900ಕೆ.ಪಿ.ಎಸ್. ಶಾಲೆಗಳ ಆರಂಭಕ್ಕೆ ಮುನ್ನುಡಿ ಬರೆಯಲಾಗುವುದು. ಎಲ್.ಕೆ.ಜಿ.ಯಿಂದ ಎಸ್.ಎಸ್.ಎಲ್.ಸಿ.ವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಕ್ಕಳಿಗೆ ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ನೀಡಲಾಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಪದವೀಪೂರ್ವ ಶಿಕ್ಷಣದವರೆಗೆ ವಿಸ್ತರಿಸಲಾಗುವುದು ಎಂದರು.
ಗುಣಾತ್ಮಕ ಶಿಕ್ಷಣ, ರಚನಾತ್ಮಕ ಕಲಿಕಾ ತರಗತಿಗಳನ್ನು ನಡೆಸಲು ಸಹಕಾರಿಯಾಗುವಂತೆ ಪ್ರತಿ ಶಾಲೆಗಳಲ್ಲಿ ಆಡಳಿತ ಮಂಡಳಿ ರಚನೆಯಂತಹ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದ ಅವರು, ಶಾಲೆಗಳ ನೋಂದಣಿ, ನವೀಕರಣ ಪ್ರಕ್ರಿಯೆಯನ್ನು ಇನ್ನಷ್ಟು ಸರಳೀಕರಣಗೊಳಿಸಲು ಸದನ ಸಮಿತಿ ರಚಿಸಲು ಸೂಚಿಸಲಾಗಿದೆ ಎಂದ ಅವರು ಫಲಿತಾಂಶ ಸುಧಾರಣೆಯಲ್ಲಿ ಶಿಕ್ಷಕರ ಪ್ರಾಮಾಣಿಕ ಪ್ರಯತ್ನ ಮುಂದುವರೆಯಲೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಅವರು ಮಾತನಾಡಿ, ವಿದ್ಯಾರ್ಥಿಗಳ ಸುಂದರ ಬದುಕು- ಭವಿಷ್ಯದ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ. ಒಂದು ಮೈಲುಗಲ್ಲಾಗಲಿದೆ. ಯಾವುದೇ ಮಗು ಕಲಿಕೆಯಿಂದ ಹಿಂದೆ ಸರಿಯದಂತೆ, ಆ ಮಗು ನಿರಂತರವಾಗಿ ಶಾಲೆಗೆ ಬರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಶೇ.100ರಷ್ಟು ಫಲಿತಾಂಶ ಸಾಧನೆಗೆ ವಿಶೇಷ ಗಮನಹರಿಸಬೇಕು ಎಂದವರು ನುಡಿದರು.
ಪ್ರತಿ ಮಗುವೂ ಕಲಿಕೆಯಿಂದ ಹಿಂದುಳಿಯದಂತೆ ಹಾಗೂ ಭಯ ಮತ್ತು ಒತ್ತಡಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ಮಗು ಗೈರು ಹಾಜರಾಗದಂತೆ ನೋಡಿಕೊಳ್ಳಬೇಕು. ಕಾಲಕಾಲಕ್ಕೆ ಪೋಷಕರ ಸಭೆ ನಡೆಸಿ, ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕ ವಾತಾವರಣ ಕಲ್ಪಿಸುವಂತೆ ಪ್ರೇರೇಪಿಸಬೇಕು. ಕಲಿಕೆಯಿಂದ ಹಿಂದುಳಿದ ಮಕ್ಕಳ ಮನೆಗೆ ಶಿಕ್ಷಕರು ತೆರಳಿ ಅಗತ್ಯ ಮಾರ್ಗದರ್ಶನ ನೀಡುವಂತೆ ಅವರು ಸಲಹೆ ನೀಡಿದ ಅವರು ಶಿಕ್ಷಕರ ಪ್ರಾಮಾಣಿಕ ಸೇವೆ ಫಲಪ್ರದವಾಗಲಿದೆ ಎಂದರು.
ದರ್ಶನ್ ಜೈಲಲ್ಲಿದ್ದಾಗ ಮಾತಾಡ್ತಾರೆ, ಹೊರಗಡೆ ಇದ್ದಾಗ ಇದ್ದು ಇಲ್ಲದ ಹಾಗೆ ಇರ್ತಾರೆ : ಕಿಚ್ಚಗೆ ದಾಸನ ಪತ್ನಿ ಟಾಂಗ್!








