ಕೋಲಾರ : ಕನ್ನಡಿಗರಿಗೆ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರೈಲ್ವೆ ಇಲಾಖೆಗೆ ಸಂಬಂಧಿಸಿದ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮತಿಸಿದ್ದಾರೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದ ಹೊರವಲಯದ ಸಂಸದರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈಲ್ವೆ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಕನ್ನಡಿಗರಿಗೆ ಅವಕಾಶ ನೀಡುವಂತೆ ತಾವು ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾಗಿ ತಿಳಿಸಿದರು. ಇದಕ್ಕೆ ಮೋದಿ ಅವರು ಸಮ್ಮತಿಸಿದರು ಎಂದು ಮಾಹಿತಿ ನೀಡಿದರು.








