ಧಾರವಾಡ : ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಪಶು ಆಸ್ಪತ್ರೆ ಮುಂದೇನೆ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಕಳೆದ ರಾತ್ರಿ ಈ ಒಂದು ಘಟನೆ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹನುಮಂತ (36) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಸ್ಪತ್ರೆ ಮುಂದೆ ಮರಕೆ ನೇಣು ಹಾಕಿಕೊಂಡು ಹನುಮಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹನುಮಂತ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಇದೀಗ ತಿಳಿದು ಬಂದಿದೆ.








