ಗದಗ : ಗದಗದಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು ನಗರದ ಶಾಂತಿ ಚಿತ್ರಮಂದಿರದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಚಿತ್ರಮಂದಿರ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಘಟನೆಯಲ್ಲಿ ಚಿತ್ರಮಂದಿರದಲ್ಲಿ ಇದ್ದಂತಹ ಎಲ್ಲಾ ಪೀಠೋಪಕರಣಗಳು ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿವೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಘಟನೆ ಕುರಿತು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








