ಹಾಸನ : ಹಾಸನ ಜಿಲ್ಲೆಯ ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇಮೇಲ್ ಬೆದರಿಕೆ ಸಂದೇಶ ಬಂದಿದೆ.ಈ ಕುರಿತು ತಹಶೀಲ್ದಾರ್ ಮಲ್ಲಿಕಾರ್ಜುನ್ ಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಕೂಡಲೇ ತಶಿಲ್ದಾರ್ ಮಲ್ಲಿಕಾರ್ಜುನ್ ಪೊಲೀಸರಿಗೆ ಈ ಕುರಿತು ಮಾಹಿತಿ ತಲುಪಿಸಿದ್ದಾರೆ. ಆಲೂರು ಪೊಲೀಸ್ ಠಾಣೆ ಪಕ್ಕದಲ್ಲಿಯೇ ತಾಲೂಕು ಕಚೇರಿ ಇದೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿಸೆಂಬರ್ 15 ರಂದು ಸಹ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು.








