ಮೈಸೂರು : ಇಂದು ಬೆಳಿಗ್ಗೆ ತಾನೇ ಹಾಸನ ಜಿಲ್ಲೆಯ ಅಲ್ದೂರು ತಾಲೂಕಿನ ತಹಶೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು ಅದರ ಬೆನ್ನಲ್ಲೇ, ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ RDX ಬಾಂಬ್ ಸ್ಪೋಟಿಸೋದಾಗಿ ಇದೀಗ ಬೆದರಿಕೆ ಸಂದೇಶ ಬಂದಿದೆ.
ಸರಗೂರು ತಾಲೂಕು ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ ಇ-ಮೇಲ್ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಪೋಟಗೊಳ್ಳುತ್ತೆ ಎಂದು ಸಂದೇಶ ಬಂದಿದೆ. ಇ- ಮೇಲ್ ನೋಡಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಸದ್ಯಘಟನಾ ಸ್ಥಳಕ್ಕೆ ಸರಗೂರು ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.








