ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ಸಿಎಂ, ಡಿಸಿಎಂ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗಬೇಕಾಗಿದೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದು ಕಡೆ ಸಿಎಂ ಸಿದ್ಧರಾಮಯ್ಯ ಅವರೇನೋ ಹೈಕಮಾಂಡ್ ಬಯಸುವವರೆಗೂ ನಾನೇ ಸಿಎಂ ಎಂದು ಪದೇ ಪದೇ ಪುನರುಚ್ಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.
ಮತ್ತೊಂದು ಕಡೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಬಳಿ ಒಪ್ಪಂದ ಆಗಿದೆ, ಅಧಿಕಾರ ಹಂಚಿಕೆ ದೆಹಲಿಯಲ್ಲಿ 5-6 ನಾಯಕರ ನಡುವೆ ನಡೆದಿರುವ “ಗುಟ್ಟಿನ ವ್ಯಾಪಾರ” ಎಂದು ಹೇಳುತ್ತಾ ತಮ್ಮ ಕನಸು ನೆರವೇರಿಸಿಕೊಳ್ಳಲು ಗುಡಿ ಗೋಪುರ ಸುತ್ತುತ್ತಿದ್ದಾರೆ. ಆದರೆ ಅತ್ತ ಹೈಕಮಾಂಡ್ ನೋಡಿದರೆ, ಇದು ರಾಜ್ಯ ಮಟ್ಟದಲ್ಲಿ ಸೃಷ್ಟಿ ಆಗಿರುವ ಗೊಂದಲ, ನೀವೇ ಬಗೆಹರಿಸಿಕೊಳ್ಳಿ ಎಂದು ಜಾರಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರಿಗೆ ಕರ್ನಾಟಕದ ಕಾಂಗ್ರೆಸ್ ನಲ್ಲಿ ಉದ್ಭವ ಆಗಿರುವ ಸಮಸ್ಯೆ ಬಗೆಹರಿಸುವ ಸಾಮರ್ಥ್ಯ ಇಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಮಲ್ಲಿಕಾರ್ಜುನ ಖರ್ಗೆ ಅವರ ಅಸಹಾಯಕ ಮಾತುಗಳು ನಾನು ಹೇಳಿದ್ದು ಸತ್ಯ ಎಂದು ಸಾಬೀತುಪಡಿಸಿದೆ ಎಂದಿದ್ದಾರೆ.
ಒಟ್ಟಿನಲ್ಲಿ ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗಬೇಕಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.
ಒಂದು ಕಡೆ ಸಿಎಂ @siddaramaiah ಅವರೇನೋ ಹೈಕಮಾಂಡ್ ಬಯಸುವವರೆಗೂ ನಾನೇ ಸಿಎಂ ಎಂದು ಪದೇ ಪದೇ ಪುನರುಚ್ಚಾರ ಮಾಡುತ್ತಿದ್ದಾರೆ.
ಮತ್ತೊಂದು ಕಡೆ ಡಿಸಿಎಂ @DKShivakumar ಅವರು ಹೈಕಮಾಂಡ್ ಬಳಿ ಒಪ್ಪಂದ ಆಗಿದೆ, ಅಧಿಕಾರ ಹಂಚಿಕೆ ದೆಹಲಿಯಲ್ಲಿ 5-6 ನಾಯಕರ ನಡುವೆ ನಡೆದಿರುವ "ಗುಟ್ಟಿನ ವ್ಯಾಪಾರ" ಎಂದು ಹೇಳುತ್ತಾ ತಮ್ಮ ಕನಸು ನೆರವೇರಿಸಿಕೊಳ್ಳಲು… pic.twitter.com/0MviRvCjtE
— R. Ashoka (@RAshokaBJP) December 22, 2025
ಡಿ.24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಶಾಮನೂರು ನುಡಿ ನಮನ: ಸಚಿವ ಈಶ್ವರ ಖಂಡ್ರೆ








