ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕರ ಶಿಕ್ಷಕರ ಸಭೆಯನ್ನು ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕರ-ಶಿಕ್ಷಕರ ಮಹಾಸಭೆಯನ್ನು ನಡೆಸುವ ಬಗ್ಗೆ ಉಲ್ಲೇಖಿತ ಸುತ್ತೋಲೆಯೊಂದಿಗೆ ನೀಡಲಾಗಿರುವ ಸೂಚನೆಗಳು ಮತ್ತು ಅನುಬಂಧದಲ್ಲಿ ತಿಳಿಸಲಾಗಿರುವ ವೇಳಾಪಟ್ಟಿಯಂತೆ ಹಾಗೂ ನವೆಂಬರ್ 14ರಂದು ಮಕ್ಕಳ ದಿನಾಚಾರಣೆಯ ಪ್ರಯುಕ್ತ ರಾಜ್ಯಾದ್ಯಂತ ಪೋಷಕರ-ಶಿಕ್ಷಕರ ಮಹಾ ಸಭೆಯಯನ್ನು ಅಯೋಜಿಸಿ ನಡೆಸಲಾಗಿದೆ.
ಇದೇ ರೀತಿ ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕರ-ಶಿಕ್ಷಕರ ಸಭೆಯನ್ನು ಕಡ್ಡಾಯವಾಗಿ ನಡೆಸಲು ಈ ಕೆಳಕಂಡ ದಿನಾಂಕಗಳನ್ನು ನಿಗಧಿಪಪಡಿಸಿದೆ ಹಾಗೂ ಈ ಕೆಳಕಂಡ ನಮೂನೆಯಂತೆ ವರದಿಯನ್ನು ಕ್ರೋಡಿಕರಿಸಿ ಈ ಕಛೇರಿಗೆ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆಯ ಸಂಬಂಧಿಸಿದ ಎಲ್ಲಾ ಆಧಿಕಾರಿಗಳಿಗೆ ಅಗತ್ಯ ಕ್ರಮವಹಿಸಲು ತಿಳಿಸಲಾಗಿದೆ (ಸುತ್ತೋಲೆ ಲಗತ್ತಿಸಿದೆ).









