ಬೆಂಗಳೂರು : ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್, ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಹೌದು, ನಾಳೆ ಮ್ಯಾಚ್‌ಗೆ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಹೊರಭಾಗದಲ್ಲಿ ಅಭಿಮಾನಿಗಳು ಸೇರುವ ಆತಂಕ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿದೆ.








