ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ನೀರಿನ ಟ್ಯಾಂಕರ್ ಗೆ ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಾದಪ್ಪನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.
ಹೆದ್ದಾರಿಯಲ್ಲಿ ಟ್ಯಾಂಕರ್ ಸಿಬ್ಬಂದಿ ಗಿಡಗಳಿಗೆ ನೀರು ಹಾಕುತ್ತಿದ್ದ. ಈ ವೇಳೆ ವೇಗವಾಗಿ ಬಂದು ಟ್ಯಾಂಕರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಯಿಲ್ ಟ್ಯಾಂಕರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೊಸಕೋಟೆ-ದಾಬಸ್ಪೇಟೆ ನಡುವಿನ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತ ಸ್ಥಳಕ್ಕೆ ಸೂಲಿಬೆಲೆ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








