Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ
KARNATAKA

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಅನ್ನು ಯಾವುದೇ ಕಾರಣಕ್ಕೆ ಅಂಗೀಕರಿಸದಂತೆ ಬಿಜೆಪಿ ವತಿಯಿಂದ ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಅವರು ತಿಳಿಸಿದ್ದಾರೆ.

ನಗರದಲ್ಲಿ ಇಂದು ಕೆ.ಜಿ. ರಸ್ತೆ ಬಳಿ ಇರುವ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ನಾಡಿದ್ದು ಮಾನ್ಯ ರಾಜ್ಯಪಾಲರಿಗೆ ಮನವಿ ಕೊಡಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರು ನೇತೃತ್ವ ವಹಿಸುವರು. ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಈ ವಿಧೇಯಕದ ವಿರುದ್ಧ ಇವತ್ತು ಇಲ್ಲಿ ಸಾಂಕೇತಿಕವಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇವತ್ತು ಹೋರಾಟ ನಡೆಸಲಾಗುತ್ತಿದೆ ಎಂದು ವಿವರಿಸಿದರು. ಮಸೂದೆ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ ಮಾಡಲಿದ್ದೇವೆ ಎಂದು ಹೇಳಿದರು.

ಕೇಂದ್ರಕ್ಕೆ ಪತ್ರ ಬರೆಯಲಿದ್ದೇವೆ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹಾಗೂ ಜೈಲಿಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಕುರಿತು ಗೌರವಾನ್ವಿತ ರಾಷ್ಟ್ರಪತಿಗಳ ಗಮನ ಸೆಳೆಯಲಿದ್ದೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಮತ್ತೊಮ್ಮೆ ತುರ್ತು ಪರಿಸ್ಥಿತಿ- ಎಸ್.ಹರೀಶ್

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಮಾತನಾಡಿ, ಬಾಬಾ ಸಾಹೇಬ ಡಾ.ಅಂಬೇಡ್ಕರರ ಸಂವಿಧಾನದಲ್ಲಿ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಎಂಬ 3 ಹಂತಗಳಿವೆ. ಇದೀಗ ಮಾತಿನ ಸ್ವಾತಂತ್ರ್ಯದ ವಿರುದ್ಧವಾಗಿ ಹೊಸ ಕಾಯ್ದೆ ತಂದಿದ್ದಾರೆ. ನ್ಯಾಯಾಂಗದ ಅಧಿಕಾರವನ್ನು ಉಲ್ಲಂಘಿಸಿ ಡಿವೈಎಸ್ಪಿ ಮೇಲ್ಪಟ್ಟ ಅಧಿಕಾರಿ ಯಾರನ್ನಾದರೂ ಏಕಾಏಕಿ ಜೈಲಿಗೆ ಹಾಕುವ ಕಾನೂನು ತಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತುರ್ತು ಪರಿಸ್ಥಿತಿ ತಂದಿದ್ದಾರೆ ಎಂದು ಆಕ್ಷೇಪಿಸಿದರು.

ತೆಲಂಗಾಣ, ಇತರ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳು, ಇಂಡಿ ಒಕ್ಕೂಟದ ಆಡಳಿತ ಇರುವ ರಾಜ್ಯಗಳಲ್ಲಿ ಇಂಥ ಕಾನೂನು ತರಲು ಹೊರಟಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯ ಕಿತ್ತುಕೊಳ್ಳುವ ಈ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದರು.

ನಮ್ಮೆಲ್ಲ ಸಂಸದರು, ಕೇಂದ್ರ ಸಚಿವರು ಇದರ ಕುರಿತು ಗೌರವಾನ್ವಿತ ರಾಷ್ಟ್ರಪತಿಗಳನ್ನು ಭೇಟಿ ಮಾಡಲಿದ್ದಾರೆ. ಇದಕ್ಕೆ ಅಂಕಿತ ಹಾಕದಂತೆ ಮನವಿ ನೀಡಲಿದ್ದಾರೆ ಎಂದು ಹೇಳಿದರು. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ರಂಗಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ರಾಘವೇಂದ್ರ ರಾವ್, ಬೆಂಗಳೂರು ದಕ್ಷಿಣ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಶ್ರೀಮತಿ ಆಶಾ ಎಸ್. ರಾವ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.