ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾದಂತೆ ಆಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೇ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ ಗೆ ಹೈಕೋರ್ಟ್ ಸೂಚನೆ ನೀಡಿದೆ. ಆದರೇ, ಅಲ್ಲಿಯವರೆಗೂ ಭೈರತಿ ಬಸವರಾಜುಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಹೈಕೋರ್ಟ್ ನ ಈ ಆದೇಶದಿಂದ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ.








