ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಈಗಾಗಲೇ CID ಪೊಲೀಸರು 3 ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ.
ಇದರ ಮಧ್ಯ ಬೆರತಿ ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಇದೀಗ ಅರೆಸ್ಟ್ ಆಗುವ ಸಾಧ್ಯತೆ ಇದೆ.








