ಶಿವಮೊಗ್ಗ: ಜಿಲ್ಲೆಯ ಹೊಸನಗರದ ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಯ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಗೆ ಮುಜರಾಯಿ ಇಲಾಖೆಯಿಂದ 9 ಜನ ಸದಸ್ಯರನ್ನು ಒಳಗೊಂಡಂತೆ ದೇವಸ್ಥಾನ ಸಮಿತಿ ರಚನೆಗೊಂಡಿತ್ತು. ಈ ಸಮಿತಿಯು ಸೋಮವಾರದಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರವರು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಿದೆ.

ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಕಲಗೋಡು ರತ್ನಾಕರ್ ಪ್ರಸ್ತುತ ವರ್ಷದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಮ್ಮನಘಟ್ಟ ಜೇನುಕಲ್ಲಮ್ಮ ಕ್ಷೇತ್ರವು ಸ್ಥಾನ ಪಡೆದಿದ್ದು ನಮಗೆಲ್ಲರಿಗೂ ಅತ್ಯಂತ ಖುಷಿಯ ವಿಷಯವಾಗಿದೆ. ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಸಮಿತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಬೇಕಾದ ಎಲ್ಲಾ ರೀತಿಯ ಯೋಜನೆಯನ್ನು ಸಿದ್ಧಪಡಿಸಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಾಮಾನ್ಯ ಸಭೆಯ ನಂತರ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರನ್ನು ದೇವಸ್ಥಾನ ಸಮಿತಿ ವತಿಯಿಂದ ಅವರ ಸ್ವಗೃಹದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ಚಂದ್ರಮೌಳಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಿದಂಬರ, ದೇವಸ್ಥಾನ ಸಮಿತಿ ಸದಸ್ಯರಾದ ಎಂ ಪಿ ಸುರೇಶ್, ಯೋಗೇಂದ್ರ, ಉಮೇಶ್, ಗುರುರಾಜ್, ಶಿವಮ್ಮ, ಹೇಮಾ, ಭದ್ರಪ್ಪಗೌಡ ಹಾಗೂ ದೇವಸ್ಥಾನದ ಅರ್ಚಕರಾದ ಭಾಸ್ಕರ್ ಜೋಯ್ಸ್ ಉಪಸ್ಥಿತರಿದ್ದರು.
ಗ್ರಾಮೀಣ ಬಸ್ ಪಾಸ್ ನಿಯಮ ಸಡಿಲಗೊಳಿಸಿ, ಪತ್ರಕರ್ತರಿಗೆ ಆರೋಗ್ಯ ಯೋಜನೆ ಜಾರಿಗೊಳಿಸಿ: KUWJ ಒತ್ತಾಯ
BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ








