ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರಿಗೆ ಗುಡ್ ನ್ಯೂಸ್ ಅನ್ನು ನಿಗಮ ನೀಡಿದೆ. ಅಂತರ ನಿಗಮ ವರ್ಗಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು, 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ:01-01-2026 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದ್ದು, ದಿನಾಂಕ:31-01-2026 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ (ಪತಿ-ಪತ್ನಿ/ಅಂಗವಿಕಲ/ತೀವ್ರತರಹದ ಅನಾರೋಗ್ಯ ಒಳಗೊಂಡಂತೆ) ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ನೌಕರರು ಸದರಿ ಸೌಲಭ್ಯದ ಸದುಪಯೋಗವನ್ನು ಪಡೆಯಲು ತಿಳಿಸಲಾಗಿದೆ. ಸದರಿ ವಿಷಯವನ್ನು ನೌಕರರ ಗಮನಕ್ಕೆ ತರಲು ಹಾಗೂ ಕೇಂದ್ರ ಕಛೇರಿ/ವಿಭಾಗ/ಘಟಕದ/ತರಬೇತಿ ಕೇಂದ್ರ/ಕಾರ್ಯಾಗಾರಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಕೋರಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..

BREAKING: ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ‘ಋತುಚಕ್ರ ರಜೆ’: ‘KSRTC’ ಅಧಿಕೃತ ಆದೇಶ
ಬೆಂಗಳೂರಿನ ಜನತೆ ಗಮನಕ್ಕೆ: ಹೀಗಿದೆ ನಮ್ಮ ಮೆಟ್ರೋ ಫೀಡರ್ ಬಸ್ ಸೇವೆಗಳ ವಿವರ
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಹವಾನಿಯಂತ್ರಿತ ವಜ್ರ BMTC ಬಸ್ ಸಂಚಾರ ಆರಂಭ








