ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೇವಿನಗರ ಕ್ಯಾಂಪ್ ಬಳಿ ಕಾರು ಕಟ್ಟೆಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.








