ಕೊಪ್ಪಳ : ಅಂಜನಾದ್ರಿಯಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ಹೊಡೆದಾಟ ನಡೆದಿದ್ದು, ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್ ನಡೆದಿದೆ.
ಅಂಜನಾದ್ರಿಯಲ್ಲಿ ಅರ್ಚಕ ವಿದ್ಯಾದಾಸ ಬಾಬಾ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಹಂಪಿಯ ಗೋವಿಂದಾನಂದ ಸರಸ್ವತಿ ವಿರುದ್ಧ ಆರೋಪ ಮಾಡಲಾಗಿದೆ. ಪೊಲೀಸರ ಸಮ್ಮುಖದಲ್ಲೇ ಇಬ್ಬರು ಸ್ವಾಮೀಜಿಗಳ ನಡುವೆ ಗಲಾಟೆಯಾಗಿದೆ.
ಅಂಜನಾದ್ರಿಯ ಆಂಜನೇಯನ ಗರ್ಭಗುಡಿಯಲ್ಲೇ ಇಬ್ಬರು ಸ್ವಾಮಿಜಿಗಳ ಹೊಡೆದಾಟ ನಡೆಸಿದ್ದಾರೆ. ದೇವಸ್ಥಾನದ ಪೂಜೆ ವಿಚಾರದಲ್ಲಿ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದ್ದು, ಇಬ್ಬರು ಸ್ವಾಮೀಜಿಗಳನ್ನು ಪೊಲೀಸರು ಸಮಾಧಾನಪಡಿಸಿದ್ದಾರೆ.








