ಕಲಬುರ್ಗಿ : ಗಾಳಿಯಲ್ಲಿ ಗುಂಡು ಹಾರಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶರಾದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಇದೀಗ ಅರೆಸ್ಟ್ ಆಗಿದ್ದಾರೆ.
ಉಡಚಣ ಗ್ರಾಮದ ಶಂಕರಲಿಂಗೇಶ್ವರ ಹಿರೇಮಠ ಸಂಸ್ಥಾನದ ಮಠಾಧೀಶ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಗ್ರಾಮಸ್ಥರು ಹಾಗೂ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಠಾಧೀಶರ ವರ್ತನೆ ಹಾಗೂ ಅನ್ಯ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.
ಶಾಂತಲಿಂಗ ಸ್ವಾಮೀಜಿಯವರು ಪೀಠಾಧಿಪತಿ ಸ್ಥಾನದಲ್ಲಿ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಮದ್ಯ ಸೇವನೆ, ಕೆಟ್ಟ ಶಬ್ದಗಳ ಬಳಕೆ, ಕೆಟ್ಟ ಕೆಲಸಗಳ ಮೂಲಕ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ. ಎಂಟು ತಿಂಗಳ ಹಿಂದೆ, ಸ್ವಾಮೀಜಿ ವಿಜಯಪುರ ಜಿಲ್ಲೆಯಲ್ಲಿ ಮದ್ಯ ಸೇವಿಸಿ ಕಾರು ಅಪಘಾತ ಮಾಡಿದಲ್ಲದೆ, ಕುಡಿದ ಅಮಲಿನಲ್ಲಿ ಊರಿನ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಭಕ್ತರು ಆರೋಪಿಸಿದ್ದಾರೆ.








