ಬೆಂಗಳೂರು : 30 ಸಾವಿರ ಸ್ವೀಕರಿಸುವಾಗ ಎಸಿಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿಯೇ ಎಸಿಪಿ ಕೃಷ್ಣಮೂರ್ತಿ 30 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.
ಸಾಗರ್ ಹೋಟೆಲ್ ಮಾಲೀಕರ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಪ್ರತಿ ತಿಂಗಳು 32 ಸಾವಿರ ರೂಪಾಯಿ ಕೊಡಬೇಕು ಎಂದು ಎಸಿಪಿ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಸಾಗರ ಹೋಟೆಲ್ ಮಾಲೀಕ ಲೋಕಾಯುಕ್ತಕ್ಕೆ ದೂರು ನೀಡಿದ್ದರು ಇಂದು 30 ಸಾವಿರ ಲಂಚ ಸ್ವೀಕರಿಸುವಾಗ ಎಸಿಪಿ ಕೃಷ್ಣಮೂರ್ತಿ ಬಲೆಗೆ ಬಿದ್ದಿದ್ದಾರೆ. ಎಸಿಪಿ ಕೃಷ್ಣಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ಸಹ ಲಭ್ಯವಾಗಿತ್ತು.








