ಹುಬ್ಬಳ್ಳಿ : ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ ಕರಾಡೆ(29) ಕೊಲೆಯಾದ ಯುವಕ. ಕೊಲೆ ಮಾಡಿದ ಆರೋಪಿಗಳನ್ನು ಘಟನೆ ನಡೆದ ಅರ್ಧ ಗಂಟೆಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಲೆಯಾದ ಯುವಕನನ್ನು ಮೂಲತಃ ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿಯಾದ ವಿಠ್ಠಲನನ್ನು, ಹುಣಸಿಕಟ್ಟಿ ಗ್ರಾಮಕ್ಕೆ ಪತ್ನಿ ಮನೆಗೆ ಬಂದಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಿಸಾಕಿದ್ದರು. ಕೊಲೆಗೀಡಾದ ವಿಠ್ಠಲ್ ಹುಬ್ಬಳ್ಳಿಯ ವಿದ್ಯಾನಗರ, ನವನಗರ, ಹುಬ್ಬಳ್ಳಿ ಗ್ರಾಮೀಣ, ತಡಸ ಸೇರಿದಂತೆ ವಿವಿಧ ಕಡೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಅಲ್ಲದೇ ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ.
ಹುಬ್ಬಳ್ಳಿ, ಕಲಘಟಗಿ, ತಡಸ ಸೇರಿದಂತೆ ಧಾರವಾಡ ಸುತ್ತಮುತ್ತಲು ಬೈಕ್ ಕಳ್ಳತನದಲ್ಲಿ ಕುಖ್ಯಾತಿ ಪಡೆದಿದ್ದ ವಿಠ್ಠಲನನ್ನು ಆತನ ಸಂಬಂಧಿಕರೇ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆಯಾದ ಅರ್ಧ ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಕಲಘಟಗಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.








