ಬೆಂಗಳೂರು : ನಾಳೆ ರಾಜ್ಯಾದ್ಯಂತ ವಾಜಪೇಯಿ ಅವರ ಹುಟ್ಟುಹಬ್ಬ ಆಚರಣೆ ಮಾಡುತ್ತೇವೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಜನರು ಬೇಸತ್ತಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶ ಸ್ಪಷ್ಟ ಸಂದೇಶವಾಗಿದೆ. ಬ್ಯಾಲೆಟ್ ಪೇಪರ್ ಬೇಕೆಂದು ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದರು. ರಾಹುಲ್ ಗಾಂಧಿ ಸಿದ್ದರಾಮಯ್ಯ ಆದಿಯಾಗಿ ನಾಟಕ ಮಾಡಿದರು. ಬ್ಯಾಲೆಟ್ ಪೇಪರ್ ನಲ್ಲಿ ನಡೆದ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
ಇಂದು ಮಾಜಿ ಪ್ರಧಾನ ಮಂತ್ರಿ ವಾಜ್ಪೇಯ್ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಟಲ್ ದೀಪೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಯಾವ ರೀತಿ ದೇಶವನ್ನು ಮುನ್ನಡೆಸಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ದೇಶದ ಮಹಾನ್ ನಾಯಕನನ್ನು ಸ್ಮರಣೆ ಮಾಡುವ ದಿನ ಅಟಲ್ ದೀಪೋತ್ಸವ ಕಾರ್ಯಕ್ರಮದಲ್ಲಿ ಬಿ ವೈ ವಿಜೇಂದ್ರ ಹೇಳಿಕೆ ನೀಡಿದರು.
ನಾನು ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇದೀಗ ತಿರುಗೇಟು ನೀಡಿದ್ದಾರೆ. ಜನವಿರೋಧಯ ಕಾಂಗ್ರೆಸ್ ಸರ್ಕಾರದಿಂದ ಜನರು ದೂರವಾಗುತ್ತಿದ್ದಾರೆ ಯಾರು ಸಿಎಂ ಆಗಿರುತ್ತಾರೆ ಮುಂದೆ ಯಾರು ಬರುತ್ತಾರೆ ಎಂಬ ಪ್ರಶ್ನೆ ಇಲ್ಲ.ರಾಜ್ಯ ಸರ್ಕಾರ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಬೇಕು ಅಷ್ಟೇ. ಇನ್ನಾದರೂ ಕಾಂಗ್ರೆಸ್ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಡಿಕೆ ಶಿವಕುಮಾರ್ ದಿನನಿತ್ಯ ಒಂದೊಂದು ಹೇಳಿಕೆ ಕೊಡುತ್ತಿದ್ದಾರೆ ಎಂದು ಹೇಳಿಕೆ ನೀಡಿದರು.








