ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ.
ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.
ವೇಗವಾಗಿ ಬರುತ್ತಿದ್ದ ಬಸ್ ಬೃಹತ್ ಕಂಟೈನರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಗೆ ಬೆಂಕಿ ಹತ್ತಿಕೊಂಡಿದೆ. ಒಂದಷ್ಟು ಪ್ರಯಾಣಿಕರು ಬಸ್ನಿಂದ ಇಳಿದರೂ ಕೂಡಾ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.
ಅಪಘಾತ ಎಸಗಿದ ಲಾರಿ ಮತ್ತು ಬಸ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.





