ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಹೇಳಿದ್ಆರೆ.
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು.
ಮೃತರ… pic.twitter.com/Ol4dR9ercB— Siddaramaiah (@siddaramaiah) December 25, 2025








