ಬೆಂಗಳೂರು : ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು.
ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ…
— Siddaramaiah (@siddaramaiah) December 25, 2025







