ಬೆಂಗಳೂರು: ಚಿತ್ರದುರ್ಗದಲ್ಲಿ ಸಂಭವಿಸಿದ ಬಸ್ ಅಗ್ನಿ ದುರಂತದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿಗಳು, ದುಃಖತಪ್ತ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದರು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ರಾಷ್ಟ್ರಪತಿ ಮುರ್ಮು ಅವರು ತಮ್ಮ ಪೋಸ್ಟ್ ನಲ್ಲಿ, “ಕರ್ನಾಟಕದ ಚಿತ್ರದುರ್ಗದಲ್ಲಿ ಸಂಭವಿಸಿದ ಬಸ್ ಅಗ್ನಿ ದುರಂತದಿಂದ ತೀವ್ರ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಗೊರ್ಲತು ಗ್ರಾಮದ ಬಳಿ ಸೀಬರ್ಡ್ ಖಾಸಗಿ ಬಸ್ ಮತ್ತು ಇಂಧನ ಟ್ಯಾಂಕರ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುತ್ತಿದ್ದ ಲಾರಿ ಡಿವೈಡರ್ ಮೇಲೆ ಹಾರಿ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗೊರ್ಲತು ಗ್ರಾಮದ ಬಳಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಒಂಬತ್ತು ಮಂದಿ ಮೃತಪಟ್ಟಿದ್ದಾರೆ.







