ಹುಬ್ಬಳ್ಳಿ : ಹುಬ್ಬಳ್ಳಿ ಪಕ್ಕದ ತಾರಿಹಾಳ ಬ್ರಿಡ್ಜ್‌ನಿಂದ ಗಾಮನಗಟ್ಟಿಗೆ ಸಂಪರ್ಕ ಕಲ್ಪಿಸುವ ವಿಮಾನ ನಿಲ್ದಾಣದ ಹಿಂಬದಿಯ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕಕ್ಕೆ ಉಂಟುಮಾಡಿದೆ.
ಈ ಕುರಿತು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿರತೆಯ ಓಡಾಟದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.ಇದೇ ಚಿರತೆ ಗೋಕುಲ್ ರೋಡ್ ವ್ಯಾಪ್ತಿಯ ರೇಣುಕಾ ನಗರದಲ್ಲಿಯೂ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಆತಂಕ ಹೆಚ್ಚಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








