ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದು, ಇದರ ಮಧ್ಯ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತ ಕುಳಿತುಕೊಳ್ಳಬಾರದು ಎಂದು ಪಾಟೀಲ್ ಪುಟ್ಟಪ್ಪ ಹೇಳಿಕೆಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ. ಅಂದರೆ ತಮ್ಮ ಸಹೋದರ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಒಂದು ಪೋಸ್ಟ್ ಮಾಡಿರಬಹುದು ಎಂದು ಇದೀಗ ಭಾರಿ ಚರ್ಚೆ ಆಗುತ್ತಿದೆ.
#ಶುಭೋದಯಕರ್ನಾಟಕ#DKSuresh pic.twitter.com/dqJFu2ik4V
— DK Suresh (@DKSureshINC) December 25, 2025








