ಚಿಕ್ಕಮಗಳೂರು: ಜಿಲ್ಲೆಯ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಜೀಪ್ ಪಲ್ಟಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 7 ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಾಬಾಬುಡನ್ ಸ್ವಾಮಿ ದರ್ಗಾಗೆ ಬಂದಿದ್ದಂತ ಜೀಪ್ ಪಲ್ಟಿಯಾದ ಪರಿಣಾಮ 7 ಪ್ರವಾಸಿಗರು ಗಾಯಗೊಂಡಿದ್ದಾರೆ.
ಪುತ್ತೂರಿನಿಂದ ಜೀಪ್ ನಲ್ಲಿ ಪ್ರವಾಸಕ್ಕೆ 7 ಮಂದಿ ಬಂದಿದ್ದರು. ಮುಳ್ಳಯ್ಯನಗಿರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ. ಇದರಿಂದಾಗಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








