ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಖಾಸಗಿ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.
ಗೊರ್ಲತ್ತು ಗ್ರಾಮದ ಬಳಿ ನಿನ್ನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ನನ್ನು ಅಪಘಾತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ರು. ಗಾಯಗೊಂಡವರನ್ನು ನಿನ್ನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಯಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 7 ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.








