ಬೆಂಗಳೂರು : ಬೆಂಗಳೂರಿನ ಜನತೆಗೆ ಹೊಸ ವರ್ಷಕ್ಕೆ ಶಾಕ್ ನೀಡಿದ್ದು, ಡಿಸೆಂಬರ್ 31 ರಂದು ಬೆಂಗಳೂರಿನ ಉದ್ಯಾನವನಗಳು ಹಾಗೂ ಕೆರೆಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.
ದಿನಾಂಕ 31-12-2025ರ ಸಂಜೆ 6:00 ಘಂಟೆ ನಂತರ ಪಾಲಿಕೆಗೆ ಸೇರಿದ ಉದ್ಯಾನವನಗಳು ಹಾಗೂ ಕೆರೆಗಳು, ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, 2026ನೇ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಈ ವರ್ಷದ ಕೊನೆಯ ದಿನವಾದ 31-12-2025ರ ರಾತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವ ಸಾಧ್ಯತೆ ಇರುತ್ತದೆ. ಇದರಿಂದಾಗಿ ಯಾವುದೇ ಅಹಿತಕರ ಘಟನೆಗಳು ಹಾಗೂ ಸಾರ್ವಜನಿಕ ಶಾಂತಿ ಭಂಗವಾಗುವ ಸಂಭವವಿರುವುದರಿಂದ, ಸಾರ್ವಜನಿಕ ಸುರಕ್ಷಯಿಂದಾಗಿ, ಮುಂಜಾಗ್ರತಾ ಕ್ರಮವಾಗಿ ದಿನಾಂಕ 31-12-2025 ರಂದು ಸಂಜೆ 6:00 ಗಂಟೆಯ ನಂತರ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳು, ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಿ, ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.









