ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯ ಜೊತೆಗೆ ಅಸಭ್ಯ ವರ್ತನೆ ತೋರಿರುವ ಆರೋಪ ಕೇಳಿ ಬಂದಿದ್ದು ಮೆಟ್ರೋದಲ್ಲಿ ಯುವತಿಯ ಮೈಮುಟ್ಟಿ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ತೆರಳುವಾಗ ಈ ಒಂದು ಘಟನೆ ನಡೆದಿದೆ.
ಅಸಭ್ಯ ವರ್ತನೆ ಬಗ್ಗೆ ಅಲ್ಲಿಯೇ ಇದ್ದಂತಹ ಭದ್ರತಾ ಸಿಬ್ಬಂದಿಗೆ ಯುವತಿ ಹೇಳಿದ್ದಾಳೆ. ಕೂಡಲೇ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಪೊಲೀಸರು ಎನ್ ಸಿ ಆರ್ ದಾಖಲಿಸಿ ವ್ಯಕ್ತಿಗೆ ವಾರ್ನಿಂಗ್ ಕೊಟ್ಟು ಕಳುಹಿಸಿದ್ದಾರೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿದೆ. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.








