ಮೈಸೂರು : ಇಲ್ಲಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ವಿಶ್ವ ವಿಖ್ಯಾತ ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಈ ಘಟನೆ ನಡೆದಿದೆ.
ಬಲೂನ್ಗೆ ಬಳಸುವ ಹೀಲಿಯಂ ಗ್ಯಾಸ್ನ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಐವರಲ್ಲಿ ಇಬ್ಬರು ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸಲೀಂ ಖಮರುದ್ದೀನ್ (40) ಮೃತ ವ್ಯಕ್ತಿ ಎಂದು ತಿಳಿದು ಬಂದಿದ್ದು ಇದೀಗ ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೂವಿನ ವ್ಯಾಪಾರಿ ಮಂಜುಳ ಸಹ ಸಾವನ್ನಪ್ಪಿದ್ದಾರೆ ಆ ಮೂಲಕ ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ಇದೀಗ ಈ ಒಂದು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರವಾಗಿ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಂಜುಳಾ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಂಜುಳಾ ಸಾವನ್ನಪ್ಪಿದ್ದಾರೆ. ನಿನ್ನೆ ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರಿ ಅನಾಹುತ ಸಂಭವಿಸಿತ್ತು ಘಟನೆಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಸಲೀಂ ಸಾವನ್ನಪ್ಪಿದ್ದ ಆದರೆ ಗಂಭೀರವಾಗಿ ಗಾಯಗೊಂಡ ಮಂಜುಳಾ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಘಟನೆ ಹಿನ್ನೆಲೆ
ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ, ಪರಿಶೀಲನೆ ನಡೆಸಿದರು. ಗಾಯಗೊಂಡಿರುವ ಐದು ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ ಮುಳುಗಿದ್ದ ಸಾಂಸ್ಕೃತಿಕ ನಗರಿ ಮೈಸೂರು ಈ ಘಟನೆಯಿಂದ ಬೆಚ್ಚಿಬಿದ್ದಿದೆ.








