ಬೆಂಗಳೂರು : ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹಾರಾಷ್ಟ್ರದ ನಾಗಪುರದ ತನ್ನ ಮನೆಯಲ್ಲಿ ಪತಿ ಸೂರಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೂರಜ್ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆ ಮಾಡಿಕೊಂಡಿದ್ದರು.
ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನ್ನಪ್ಪಿದ್ದರು. ಇದೀಗ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.








