ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಬೆಳಗಾವಿ ವಿಭಾಗದಲ್ಲಿ 2025-26 ನೇ ಸಾಲಿನ ಮಕ್ಕಳ ಶೈಕ್ಷಣಿಕ ಪ್ರವಾಸದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ-01 ರಲ್ಲಿ ಮನವಿಯನ್ನು ಸಲ್ಲಿಸಿ 2025-26 ನೇ ಸಾಲಿನಲ್ಲಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಲು ಡಿಸೆಂಬರ-2025 ನ್ನು ಅಂತಿಮ ದಿನಾಂಕ ಎಂದು ನಿಗದಿಪಡಿಸಲಾಗಿದೆ. ಆದರೆ ಸದರಿ ಮಾಹೆಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆದ ಕಾರಣದಿಂದ ವಿಭಾಗೀಯ ವ್ಯವಸ್ಥಾಪಕರು ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಇವರು ಪ್ರವಾಸಕ್ಕೆ ಅನುಮತಿ ನೀಡಿರುವುದಿಲ್ಲ. ಆದ್ದರಿಂದ ಬೆಳಗಾವಿ ವಿಭಾಗದ ಶಾಲಾ ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಲು ದಿನಾಂಕವನ್ನು ವಿಸ್ತರಿಸಿ ಅನುಮತಿ ನೀಡಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ.
ಈ ಕುರಿತು ಪರಿಶೀಲಿಸಲಾಗಿ, ಬೆಳಗಾವಿ ವಿಭಾಗಕ್ಕೆ ಒಳಪಡುವ ಶಾಲೆಗಳಿಗೆ ಮಾತ್ರ 2025-26 ನೇ ಸಾಲಿನ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಲು ದಿನಾಂಕ : 21-01-2026 ರವರೆಗೆ ಅವಧಿಯನ್ನು ವಿಸ್ತರಿಸಿದ ಹಾಗೂ ಉಲ್ಲೇಖ-2 & 3 ರ ಸುತ್ತೋಲೆಗಳ ಷರತ್ತಿಗೊಳಪಟ್ಟು ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಲು ತಿಳಿಸಿದೆ.









