ಬೆಂಗಳೂರು : ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಮದುವೆಯಾದ ಕೇವಲ 58 ದಿನಗಳಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದು ಅದರ ಬೆನ್ನಲ್ಲೇ ಆಕೆಯ ಪತಿ ಶಿವರಾಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಷ್ಟೇ ಅಲ್ಲದೆ ಮಗ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ನಾಗಪುರದಲ್ಲಿರುವ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಹೌದು ಹೌದು ಸೂರಜ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ತಾಯಿ ಜಯಂತಿ ಅವರು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ ಮಹಾರಾಷ್ಟ್ರದ ನಾಗಪುರದಲ್ಲಿಯೇ ಜಯಂತಿಯವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








