ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರಿಗೆ ಬೀದಿ ಪುಂಡರು ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಯನಗರದಿಂದ ಬಿಟಿಎಂ ಲೇಔಟ್ ಕಡೆಗೆ ಪ್ರಯಾಣಿಸುತ್ತಿದ್ದ ಯುವತಿಗೆ ಕಿಡಿಗೇಡಿಗಳು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಸುಮಾರು 2 ಕಿಲೋಮೀಟರ್ ವರೆಗೂ ಯುವತಿಯನ್ನು ಪುಂಡರು ಫಾಲೋ ಮಾಡಿದ್ದಾರೆ. ಒಂದೇ ಬೈಕ್ ನಲ್ಲಿ ಮೂವರು ಪುಂಡರು ಯುವತಿಯನ್ನು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿ ಸ್ಕೂಟಿ ಮೇಲೆ ತೆರಳುತ್ತಿದ್ದರೆ. ಕಾರಿನಲ್ಲಿ ಹಿಂದೆ ಬರುತ್ತಿದ್ದ ವ್ಯಕ್ತಿ ಈ ವಿಡಿಯೋ ಸೆರೆ ಹಿಡಿದು ವಿಡಿಯೋ ಸಮೇತ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಅಪ್ರಾಪ್ತ ವಯಸ್ಕ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರೋಷನ್(19) ಮತ್ತು ಅಯಾನ್ (19) ಮತ್ತು ಸ್ಥಳೀಯ ಗ್ಯಾರೇಜ್ನಲ್ಲಿ ಕೆಲಸ ಮಾಡುವ ಅಪ್ರಾಪ್ತ ವಯಸ್ಕ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.








