ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗುತ್ತೆ. ಕಾನೂನು ಸುವ್ಯವಸ್ಥೆ ಮತ್ತು ಸಾರಿಗೆ ವ್ಯವಸ್ಥೆಯ ಬಗ್ಗೆ ನಿಗಾ ವಹಿಸುವುದಕ್ಕೆ ಈಗಾಗಲೇ ಗೃಹ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಈ ಪರಮೇಶ್ವರ ರವರು ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಜನ ಸೇರಬಹುದು ಎನ್ನುವ ನಿರೀಕ್ಷೆ ಇದೆ ೧೦ ಲಕ್ಷಕ್ಕೂ ಹೆಚ್ಚು ಜನರು ಸೇರಬಹುದು ಎನ್ನುವ ಊಹೆ ಇದೆ ಜನ ವಾಪಸ್ ಹೋಗಲು ವ್ಯವಸ್ಥೆ ಮಾಡಿಕೊಡಬೇಕಿದೆ. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಗಮನಹರಿಸಬೇಕಿದೆ. ಜನಸಂದಣಿ ಜಾಸ್ತಿಯಾಗಿದಂತೆ ನೋಡಿಕೊಳ್ಳಬೇಕು.
ಅಕಸ್ಮಾತ್ ಒಂದು ವೇಳೆ ಆದರೂ ಕೂಡ ಅದಕ್ಕೆ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಮಾಲ್ ಮೆಟ್ರೋ ಹೋಟೆಲ್ಗಳ ಬಳಿ ಹೆಚ್ಚು ಜನ ಸೇರುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆದಂತೆ ಸಿಸಿಟಿವಿ ಕ್ಯಾಮೆರಾ ಹಾಗೂ ಡ್ರೋನ್ ಕ್ಯಾಮೆರಾ ಗಳನ್ನು ಸಹ ಬಳಸಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಸೂಚನೆ ನೀಡಿದರು.








