ಬೆಂಗಳೂರು : ಕನ್ನಡ ಪರ ರಾಟಗಾರರ ಮೇಲಿನ ಪ್ರಕರಣ ವಾಪಸ್ ಪಡೆಯುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಶಾಲೆ ಉಳಿಸುವ ಬಗ್ಗೆ ತಜ್ಞರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುತ್ತೇವೆ ಎಂದೂ ಅವರು ಹೇಳಿದ್ದಾರೆ. ನಿನ್ನೆ ಕನ್ನಡ ಹೋರಾಟಗಾರರ ಸಮಿತಿಯಿಂದ ನಗರದ ಅರಮನೆ ಮೈದಾನದಲ್ಲಿ ನಡೆದ ಜನರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ನಾಡು, ನುಡಿ, ನೆಲ-ಜಲ ಹಾಗೂ ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ವಿಚಾರದಲಿ ಸರ್ಕಾರ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕನ್ನಡಕ್ಕಾಗಿ, ನೆಲ-ಜಲಕ್ಕೆ ಹೋರಾಡಿದವರ ಮೇಲಿನ ಪ್ರಕರಣ ಸಾಕಷ್ಟಿವೆ. ಅವನ್ನು ಹಿಂಪಡೆವ ಸಂಬಂಧ ಸಂಪುಟ ಉಪಸಮಿತಿ ರಚನೆಯಾಗಿದೆ ಎಂದು ತಿಳಿಸಿದರು. ಉಪ ಸಮಿತಿಗೆ ಗೃಹಸಚಿವ ಪರಮೇಶ್ವರ್ ಅವರ ನೇತೃತ್ವ ಇದೆ. ಅದರ ಸಭೆಯನ್ನು ಶೀಘ್ರ ಕರೆದು ಪ್ರಕರಣ ವಾಪಸ್ ಪಡೆಯುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಕನ್ನಡ ಮಾಧ್ಯಮದ ಶಾಲೆಗಳು ಉಳಿಯಬೇಕು, ಕನ್ನಡದಲ್ಲಿ ಕಲಿಕೆಯ ವಿಚಾರಕ್ಕೆ ನಾನು ಪರವಾಗಿದ್ದೇನೆ. ಹಳ್ಳಿಗಳಲ್ಲೂ ಈಗ ಇಂಗ್ಲಿಷ್ ಶಾಲೆಗಳು ಬರುತ್ತಿವೆ. ಈ ವಿಚಾರದಲ್ಲಿ ಪೋಷಕರ ನೆರವೂ ಅಗತ್ಯ. ಕನ್ನಡ ತಜ್ಞರ ಭೆಕರೆದು ಕನ್ನಡಶಾಲೆ ಸ ಕರೆದು ಕನ್ನಡಶಾಲೆ ಉಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು. ವೈಯಕ್ತಿಕವಾಗಿ ದ್ವಿಭಾಷಾ ನೀತಿ ಪರವಾಗಿದ್ದೇನೆ. ಕ್ಯಾಬಿನೆಟ್‌ನಲ್ಲಿ ಈ ಕುರಿತು ಚರ್ಚಿಸಿ ಕ್ರಮ ವಹಿಸಲಿದ್ದೇವೆ. ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲೂ ನಿರ್ಧಾರ ಕೈಗೊಳ್ಳುವ ಬಗ್ಗೆ ಸಂಪುಟದಲ್ಲಿ ಸರ್ಕಾರ ಚರ್ಚಿಸಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡಬೇಕಾದುದು ಎಲ್ಲರ ಹೊಣೆ, ಹೊರರಾಜ್ಯದಿಂದ ಇಲ್ಲಿಗೆ ಬರುವವರಲ್ಲಿ ಕನ್ನಡ ಕಲಿಯದೆ ಬದುಕಬಹುದು ಎಂಬ ಭಾವನೆ ಇದೆ. ಕನ್ನಡ ಕಲಿಯಲೇಬೇಕೆಂಬ ಅನಿವಾರ್ಯ ವಾತಾವರಣ ಇಲ್ಲಿಲ್ಲದಿರುವುದು ಅದಕ್ಕೆ ಕಾರಣ, ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ಹಾಗೂ ಮಹಾರಾಷ್ಟ್ರಕ್ಕೆ ಹೋದರೆ ಅಲ್ಲಿನ ರಾಜ್ಯ ಭಾಷೆಯಲ್ಲೇ ಮಾತನಾಡುತ್ತಾರೆ.
ಅಷ್ಟೇ ಏಕೆ, ಇಬ್ಬರು ತುಳು ಮಾತನಾಡುವವರು ಸೇರಿದರೆ ತುಳುವಿನಲ್ಲಿ ಮಾತನಾಡುತ್ತಾರೆ. ಆದರೆ, ಇಬ್ಬರು ಕನ್ನಡಿಗರು ಯಾಕೆ ಕನ್ನಡದಲ್ಲಿ ಮಾತನಾಡಲ್ಲ ಎಂದು ಪ್ರಶ್ನಿಸಿದರು. ನಾನು ಹಿಂದಿ ಸೇರಿ ಇತರೆ ಭಾಷೆಗಳ ವಿರೋಧಿಯಲ್ಲ. ಕಲಿಯಬೇಡಿ ಎನ್ನಲ್ಲ, ಆದರೆ ಕನ್ನಡಿಗರಾಗಿರಿ. ಇಲ್ಲಿಗೆ ಬರುವ ಪರರಾಜ್ಯದವರು ಕನ್ನಡಿಗರಾಗಿರಬೇಕು. ಅವರಿಗೆ ಕನ್ನಡ ಕಲಿಸುವ, ಕನ್ನಡಿಗರಾಗಿ ಮಾಡಬೇಕಾದ ಕೆಲಸವನ್ನು ಮಾಡಬೇಕು ಎಂದರು.








