ಆಂಧ್ರಪ್ರದೇಶ : ಕೇರಳದ ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ಅನಕಾಪಲ್ಲಿಯಲ್ಲಿ ಯಲಮಂಚಿಯಲ್ಲಿ ಈ ಒಂದು ಘಟನೆ ನಡೆದಿದೆ.
ಎಕ್ಸ್ಪ್ರೆಸ್ ರೈಲಿನ ಬಿ1 ಬೋಗಿಯಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ.ಇದರಲ್ಲಿ ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ದುರಂತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಆಂಧ್ರಪ್ರದೇಶದ ವಿಜಯವಾಡ ನಿವಾಸಿ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








